Publish Date: Sun, 22 Apr 2018 (08:47 IST)
Updated Date: Sun, 22 Apr 2018 (08:48 IST)
ಬೆಂಗಳೂರು: ಇದುವರೆಗೆ ಚಾಮುಂಡೇಶ್ವರಿಯಲ್ಲಿ ಮಾತ್ರ ನನ್ನ ಸ್ಪರ್ಧೆ ಎನ್ನುತ್ತಲೇ ಇದ್ದ ಸಿಎಂ ಸಿದ್ದರಾಮಯ್ಯ ಇದೀಗ ಬಾದಾಮಿಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿಯಾಗಿದೆ.
ಸಿಎಂ ಏಪ್ರಿಲ್ 24 ರಂದು ಬಾದಾಮಿಯಲ್ಲಿ ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಬಾದಾಮಿಯಲ್ಲಿ ಮುಖ್ಯಮಂತ್ರಿ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ.
ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ನಾಮಪತ್ರ ಸಲ್ಲಿಸಿದ್ದಾರೆ. ಇದೀಗ ಸ್ಥಳೀಯ ನಾಯಕರ ಒತ್ತಡ ಹಿನ್ನಲೆಯಲ್ಲಿ ಬಾದಾಮಿಯಲ್ಲೂ ಸ್ಪರ್ಧಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.