Publish Date: Wed, 18 Apr 2018 (09:16 IST)
Updated Date: Wed, 18 Apr 2018 (09:18 IST)
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ತಮ್ಮ ಟ್ವಿಟರ್ ನಲ್ಲಿ ಮಾಹಿತಿ ಕೊಟ್ಟಿದ್ದಾರೆ.
ಸದ್ಯಕ್ಕೆ ಮೈಸೂರಿಗೆ ತೆರಳಿರುವ ಸಿದ್ದರಾಮಯ್ಯ ತಾವು ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರ ಮತ್ತು ಪುತ್ರ ಯತೀಂದ್ರ ಸ್ಪರ್ಧಿಸುವ ವರುಣಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಮೂರು ದಿನಗಳ ಕಾಲ ಇಲ್ಲಿ ಪ್ರಚಾರ ನಡೆಸಿ ಬಳಿಕ ಸಿಎಂ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 24 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.