Publish Date: Sat, 17 Feb 2018 (10:59 IST)
Updated Date: Sat, 17 Feb 2018 (11:02 IST)
ಬೆಂಗಳೂರು: ತಮ್ಮ ತವರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ಆಗಮಿಸಲಿರುವ ಪ್ರಧಾನಿ ಮೋದಿ ಸ್ವಾಗತಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.
ನಾಳೆ ರಾತ್ರಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ಮೋದಿ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬಳಿಕ ರೈಲ್ವೇ ಮತ್ತು ಹೆದ್ದಾರಿಗೆ ಸಾರಿಗೆ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಶೇಷವೆಂದರೆ ಈ ಎರಡೂ ಸರ್ಕಾರಿ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನವಿಲ್ಲ. ತವರು ಜಿಲ್ಲೆಯಲ್ಲೇ ನಡೆಯುತ್ತಿರುವ ಕಾರ್ಯಕ್ರಮಗಳಿಗೆ ಸಿಎಂಗೇ ಆಹ್ವಾನವಿಲ್ಲದಿರುವುದು ವಿಪರ್ಯಾಸ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ