Publish Date: Sun, 13 May 2018 (11:44 IST)
Updated Date: Sun, 13 May 2018 (11:46 IST)
ಬೆಂಗಳೂರು: ಚುನಾವಣೆ ಮುಗಿದಿದೆ. ಇನ್ನು ಫಲಿತಾಂಶವೊಂದೇ ಬಾಕಿ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.
ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ಬಿಜೆಪಿಗೆ ಬಹುಮತ ಬರಬಹುದು ಎಂದು ಲೆಕ್ಕಾಚಾರ ಹಾಕಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಚಿಂತೆ ಮಾಡದಂತೆ ಸಿಎಂ ಟ್ವೀಟ್ ಮಾಡಿದ್ದಾರೆ.
‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಮತ್ತು ಹಿತಚಿಂತಕರೇ, ನೀವೂ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿ ನನ್ನಂತೇ ದಣಿದಿದ್ದೀರಿ ಎಂದು ಗೊತ್ತು. ಎಕ್ಸಿಟ್ ಪೋಲ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಆರಾಮವಾಗಿರಿ. ಕುಟುಂಬದ ಜತೆ ಕಾಲ ಕಳೆಯಿರಿ. ಮೇ 15 ರಂದು ಸಿಗೋಣ. ಹಿರಿಯರ ಆಶೀರ್ವಾದ ಮತ್ತು ಕಿರಿಯರ ಹಾರೈಕೆಯಿಂದ ಎಲ್ಲವೂ ಒಳ್ಳೆಯದೇ ಆಗುತ್ತದೆ’ ಎಂದು ಸಿಎಂ ಸಂದೇಶ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.