Publish Date: Sun, 29 Oct 2017 (07:39 IST)
Updated Date: Sun, 29 Oct 2017 (07:41 IST)
ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಪ್ರಧಾನಿ ಮೋದಿ ಜತೆ ಯಾವುದೇ ಕಾರ್ಯಕ್ರಮದಲ್ಲೂ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿಲ್ಲ.
ಪ್ರಧಾನಿ ಮೋದಿ ಇಂದು ಬೀದರ್-ಕುಲಬರಗಿ ನಡುವೆ ರೈಲ್ವೇ ಮಾರ್ಗಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ.
ಅದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯಗೆ ತಡವಾಗಿ ಆಹ್ವಾನ ಬಂದಿರುವುದಂತೆ. ಸುದ್ದಿಗಾರರ ಜತೆ ಮಾತನಾಡಿದ ಸಿಎಂ ‘ಈ ಕಾರ್ಯಕ್ರಮಕ್ಕೆ ರೈಲ್ವೇ ಅಧಿಕಾರಿಗಳು ತಡವಾಗಿ ಆಹ್ವಾನ ಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಯ ಅರ್ಧದಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಜತೆಗೆ ಉಚಿತ ಭೂಮಿ ನೀಡುತ್ತಿದೆ. ಹೀಗಿದ್ದೂ ನಮಗೆ ಸರಿಯಾದ ಸಮಯಕ್ಕೆ ಆಹ್ವಾನ ಸಿಕ್ಕಿಲ್ಲ. ನನಗೆ ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ ಸರ್ಕಾರದ ಪರ ಆರ್ ವಿ ದೇಶಪಾಂಡೆ ಭಾಗವಹಿಸಲಿದ್ದಾರೆ’ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ