Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 3 ಜುಲೈ 2017 (17:04 IST)
ಬೆಂಗಳೂರು: ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರೆ ಬರೆದಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾ ಮಾಡಲು ಮನವಿ ಮಾಡಿದ್ದಾರೆ.


ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಹೆಚ್ಚಿನ ಸಾಲವಿದೆ.  ಹಾಗಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ವಿಚಾರ ಮಾಡಬೇಕು ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಮೊದಲು ಸಾಲ ಮನ್ನಾ ಕುರಿತು ವಿಪಕ್ಷಗಳು ಗದ್ದಲವೆಬ್ಬಿಸುವಾಗಲೆಲ್ಲಾ ಸಿಎಂ ಕೇಂದ್ರ ಮೊದಲು ಸಾಲ ಮನ್ನಾ ಮಾಡಲಿ ಎನ್ನುತ್ತಿದ್ದರು. ಕೊನೆಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದು ಹೋದ ಮೇಲೆ ಅಳೆದು ತೂಗಿ 50 ಸಾವಿರದವರೆಗಿನ ಅಲ್ಪಾವಧಿ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿತ್ತು.

ಇದೀಗ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ ಸಾಲ ಮನ್ನಾ ಮಾಡಬೇಕಾದರೆ ಕೇಂದ್ರದ ನೆರವು ಬೇಕು. ಆದರೆ ಕೇಂದ್ರ ಮೊದಲಿನಿಂದಲೂ ಸಾಲ ಮನ್ನಾ ವಿಚಾರ ಸಾಧ್ಯವೇ ಇಲ್ಲ ಎನ್ನುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ಬರೆದ ಪತ್ರಕ್ಕೆ ಕೇಂದ್ರ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments