ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಗೃಹ ಖಾತೆ ಸಚಿವರ ಸಮ್ಮುಖದಲ್ಲಿಯೇ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಅವರನ್ನು ತರಾಟೆಗೆ ತಗೆದುಕೊಂಡಿದ್ದಾರೆ.
ಮಂಗಳೂರು ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿವೈಎಸ್‌ಪಿ ಗಣಪತಿ ಖಾಸಗಿ ಚಾನೆಲ್ ಸಂದರ್ಶನ ನೀಡಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ ಎಂದು ಗೃಹ ಸಚಿವರ ಸಮ್ಮುಖದಲ್ಲಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಅವರನ್ನು ತರಾಟೆಗೆ ತಗೆದುಕೊಂಡರು.
ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ ಅವರು ಖಾಸಗಿ ಸುದ್ದಿ ವಾಹಿನಿಗೆ ಹೇಗ ಸಂದರ್ಶನ ನೀಡಿದರು. ಈ ಕುರಿತು ನಿಮ್ಮ ಗಮನಕ್ಕೆ ಬಂದಿಲ್ವಾ? ಅಧಿಕಾರಿಗಳ ಮನಸ್ಥಿತಿಯನ್ನು ತಿಳಿದುಕೊಳ್ಳಲು ನಿಮಗೆ ಸಾಮರ್ಥ್ಯವಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಅವರನ್ನು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.