Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯನವರದ್ದು ದುರಹಂಕಾರದ ಪರಮಾವಧಿ: ಪೂಜಾರಿ

ಸಿಎಂ ಸಿದ್ದರಾಮಯ್ಯನವರದ್ದು ದುರಹಂಕಾರದ ಪರಮಾವಧಿ: ಪೂಜಾರಿ
ಮಂಗಳೂರು , ಶುಕ್ರವಾರ, 3 ಜೂನ್ 2016 (15:43 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ದುರಹಂಕಾರದ ಪರಮಾವಧಿ ಎಂದು ಕಾಂಗ್ರೆಸ್ ನಾಯಕ ಜನಾರ್ಧನ್ ಪೂಜಾರಿ ಮತ್ತೆ ಗುಡುಗಿದ್ದಾರೆ. 
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ಪೂಜಾರಿ, ರಾಜ್ಯ ಸರಕಾರ ಉತ್ತಮ ಆಡಳಿತ ನೀಡಲು ವಿಫಲವಾಗಿದೆ. ಒಂದೆಡೆ ರಾಜ್ಯ ಸರಕಾರಿ ನೌಕರರು ಪ್ರತಿಭಟನೆಯಲ್ಲಿ ತೊಡಗಿದ್ದರೆ, ಇನ್ನೊಂದೆಡೆ ರಾಜ್ಯ ಪೊಲೀಸರು ಪ್ರತಿಭಟನೆಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಅವರು ದರ್ಹಂಕಾರವನ್ನು ಪಕ್ಕಕ್ಕಿಟ್ಟು ಅವರ ಸಮಸ್ಯೆಗಳಿಕೆ ಪರಿಹಾರ ಕಂಡುಕೊಳ್ಳಲಿ ಎಂದು ರಾಜ್ಯ ಸರಕಾರದ ಕಾರ್ಯವೈಖರಿ ಕುರಿತು ವಾಗ್ದಾಳಿ ನಡೆಸಿದ್ದಾರೆ.
 
ಮುಖ್ಯಮಂತ್ರಿಯವರು ರಾಜ್ಯದಲ್ಲಿ ಸಾರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಯಾರೇ ಪ್ರತಿಭಟನೆ ಕೈಗೊಂಡರು ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುತ್ತಿರಿ. ನಿಮ್ಮ ವರ್ತನೆ ಹೀಗೆ ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ಸೋಲು ಅನುಭವಿಸುತ್ತಿರಿ ಎಂದು ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಖಾಡ್ಸೆ ರಾಜೀನಾಮೆಗೆ ಒತ್ತಾಯಿಸಿದ ಕೇಜ್ರಿವಾಲ್