Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯರಿಂದ ಸರ್ವಾಧಿಕಾರಿ ಧೋರಣೆ: ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯರಿಂದ ಸರ್ವಾಧಿಕಾರಿ ಧೋರಣೆ: ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 15 ಜುಲೈ 2016 (12:53 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರು ಸಲಹೆ ನೀಡಿದ್ದಾರೆ. ಅವರ ಮಾತಿಗಾದ್ರೂ ಬೆಲೆ ಕೊಟ್ಟು ಕೆ.ಜೆ.ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಟ್ಟು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಹೇಳಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ. ಗಣಪಪತಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಲೋಕಸಭೆಯಲ್ಲು ಪ್ರಸ್ತಾಪ ಮಾಡುತ್ತೇವೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯಗೆ ಡಿ.ಕೆ.ರವಿ ತಾಯಿ ಗೌರಮ್ಮ ಶಾಪ