Select Your Language

Notifications

webdunia
webdunia
webdunia
webdunia

ಕೆಆರ್‌ಎಸ್ ನೀರಿಗಾಗಿ ತಮಿಳುನಾಡಿನಿಂದ ಒತ್ತಡ: ಅಗಸ್ಟ್ 27ರಂದು ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಕೆಆರ್‌ಎಸ್ ನೀರಿಗಾಗಿ ತಮಿಳುನಾಡಿನಿಂದ ಒತ್ತಡ: ಅಗಸ್ಟ್ 27ರಂದು ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 25 ಆಗಸ್ಟ್ 2016 (16:31 IST)
ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ತೀವ್ರ ಒತ್ತಡ ಹೇರುತ್ತಿರವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗಸ್ಟ್ 27ರಂದು ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ. 
 
ಅಗಸ್ಟ್ 27 ರಂದು ಮುಂಜಾನೆ 11.30ಕ್ಕೆ ನಡೆಯಲಿರುವ ಸಭೆಯಲ್ಲಿ ವಿಧಾನ ಮಂಡಲದ ಉಭಯ ಸದನ ನಾಯಕರು, ಕೇಂದ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ.
 
ಕಾವೇರಿ ಜಲಾಶಯದಿಂದ ಸಾಂಬಾ ಬೆಳೆಗೆ ನೀರು ಬಿಡುವಂತೆ ತಮಿಳುನಾಡು ಸರಕಾರ ಒತ್ತಾಯಿಸುತ್ತಿದೆ. ಆದರೆ, ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗದೆ ಸಂಕಷ್ಟ ಎದುರಾಗಿದೆ. ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಚರ್ಚಿಸಲು ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲಾಧಿಕಾರಿಗಳಿಗೆ ಧಮ್ಕಿ ಪ್ರಕರಣ: ಸಿಎಂ ಆಪ್ತ ಮರಿಗೌಡಗೆ ಜಾಮೀನು!