Select Your Language

Notifications

webdunia
webdunia
webdunia
webdunia

ಆವೇಶ, ಉದ್ವೇಗಕ್ಕೆ ಒಳಗಾಗದಿರಿ: ಸಿಎಂ ಸಿದ್ದರಾಮಯ್ಯ ಕರೆ

ಆವೇಶ, ಉದ್ವೇಗಕ್ಕೆ ಒಳಗಾಗದಿರಿ:  ಸಿಎಂ ಸಿದ್ದರಾಮಯ್ಯ ಕರೆ
ಬೆಂಗಳೂರು , ಮಂಗಳವಾರ, 20 ಸೆಪ್ಟಂಬರ್ 2016 (19:46 IST)
ರಾಜ್ಯದ ಹಿತ ಕಾಪಾಡಲು ಸರಕಾರ ಬದ್ಧವಾಗಿದ್ದು ಆವೇಶ, ಉದ್ವೇಗಕ್ಕೊಳಗಾಗದಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
 
ನಮ್ಮಲ್ಲಿ ಕುಡಿಯಲು ನೀರಿಲ್ಲ ಎಂದು ಮನವರಿಕೆ ಮಾಡಿದ್ದೇವೆ. ನಾಳೆ ಕಾವೇರಿ ಕಣಿವೆಯ ಶಾಸಕರು ಮತ್ತು ಸಂಸದರ ಸಭೆಯನ್ನು ಕರೆದಿದ್ದೇನೆ. ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರುತ್ತೇವೆ ಎಂದು ತಿಳಿಸಿದ್ದಾರೆ.
 
ಸುಪ್ರೀಂಕೋರ್ಟ್ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ. ನಾಲ್ಕು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ ಎಂದು ಹೇಳಿದ್ದಾರೆ.
 
ನಾಳೆಯಿಂದ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅನಿವಾರ್ಯವಾಗಿ ಒಕ್ಕೂಟ ವ್ಯವಸ್ಥೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ?