ಮಾಜಿ ಸಚಿವ ಪಿ.ಟಿ ಪರಮೇಶ್ವರ್ ನಾಯ್ಕ್ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಿದ್ದಕ್ಕೆ ಅಸಮಧಾನ ಗೊಂಡಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಾಯ್ಕಗೆ ಕರೆ ಮಾಡಿ ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ಬೆಳಿಗ್ಗೆ ಮಾಜಿ ಸಚಿವ ಪರಮೇಶ್ವರ್ ನಾಯ್ಕ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದಕ್ಕೆ ಅಸಮಾಧಾನ ಬೇಡ. ರಾಜಕೀಯದಲ್ಲಿ ಇವೆಲ್ಲಾ ಸಹಜ. ಇದರಿಂದಾಗಿ ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದಾರೆ.
ನಿಮ್ಮ ಕ್ಷೇತ್ರಕ್ಕೆ ಎಷ್ಟು ಅನುದಾನ ಬೇಕೋ ಕೇಳಿ ಕೊಡೋಣ. ಕ್ಷೇತ್ರವನ್ನು ಅಭಿವೃದ್ಧಿಪಡಿಸಿ. ನನ್ನಿಂದಾದ ಎಲ್ಲಾ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಸಚಿವ ಸ್ಥಾನ ಕೈಬಿಟ್ಟು ಹೋಗಿರುವುದಕ್ಕೆ ಅಸಮಾಧಾನಗೊಂಡಿದ್ದ ಪಿ.ಟಿ.ಪರಮೇಶ್ವರ್ ನಾಯ್ಕ್ ಭಿನ್ನಮತೀಯರ ಪಾಳಯದಲ್ಲಿ ಕಾಣಿಸಿಕೊಂಡಿದ್ದರು. ಮತ್ತೆ ಬಂಡಾಯದ ಬಾವುಟ ಹಾರಿಸಲಿದ್ದಾರೆ ಎನ್ನುವ ಅನುಮಾನ ಸಿಎಂ ಸಿದ್ದರಾಮಯ್ಯರ ಪಾಳಯದಲ್ಲಿ ಆತಂಕ ಮೂಡಿಸಿತ್ತು ಎನ್ನಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ