ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಹಿರಿಯ ನಾಯಕರ ಸಭೆಯಲ್ಲಿ ಭಾಗಿಯಾಗಲೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಿರಂತರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಡೆಯುವ ಕ್ಯಾಬಿನೆಟ್‌ನಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಲಿದ್ದಾರೆ. ಸಭೆಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಿರುವಂತೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ಸೆಪ್ಟೆಂಬರ್ 28ರವರೆಗೂ ಪ್ರತಿ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ