Webdunia - Bharat's app for daily news and videos

Install App

ಹಿರಿಯ ಸಚಿವರ ತುರ್ತು ಸಭೆ ಕರೆದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 20 ಸೆಪ್ಟಂಬರ್ 2016 (17:59 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಲಿದ್ದಾರೆ. 
 
ಹಿರಿಯ ನಾಯಕರ ಸಭೆಯಲ್ಲಿ ಭಾಗಿಯಾಗಲೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ. 
 
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನಿರಂತರವಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಡೆಯುವ ಕ್ಯಾಬಿನೆಟ್‌ನಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಲಿದ್ದಾರೆ. ಸಭೆಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಿರುವಂತೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ಸೆಪ್ಟೆಂಬರ್ 28ರವರೆಗೂ ಪ್ರತಿ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

ಮುಂದಿನ ಸುದ್ದಿ
Show comments