Select Your Language

Notifications

webdunia
webdunia
webdunia
webdunia

ಕೇವಲ ಕುರ್ಚಿ ಉಳಿಸಿಕೊಳ್ಳಲು ಸಿಎಂ ದೆಹಲಿಗೆ ಹೋಗ್ತಾರೆ: ರೇಣುಕಾಚಾರ್ಯ

ಕೇವಲ ಕುರ್ಚಿ ಉಳಿಸಿಕೊಳ್ಳಲು ಸಿಎಂ ದೆಹಲಿಗೆ ಹೋಗ್ತಾರೆ: ರೇಣುಕಾಚಾರ್ಯ
ಹಾವೇರಿ , ಸೋಮವಾರ, 19 ಸೆಪ್ಟಂಬರ್ 2016 (16:58 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಕುರ್ಚಿ ಉಳಿಸಿಕೊಳ್ಳಲು ನವದೆಹಲಿಗೆ ಹೋಗುತ್ತಾರೆ. ಆದರೆ, ಜಲ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡೋ ಕೆಲಸ ಮಾಡುತ್ತಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಲೇವಡಿ ಮಾಡಿದರು. 
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಹಾಗೂ ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದಾರೆ. ಆದರೆ, ಕೇವಲ ಪತ್ರ ಬರೆಯೋದರಿಂದ ಪ್ರಯೋಜನೆಯಾಗಲ್ಲ ಎಂದು ಹೇಳಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ರಾಜ್ಯ ಸರಕಾರದ ಪರವಾಗಿದ್ದಾರೆ. ಆದರೆ, ಕಾವೇರಿ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್.........
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ. ರಾಯಣ್ಣರ ಬಗ್ಗೆ ಅಪಾರವಾದ ಗೌರವವಿದೆ. ಬಿಜೆಪಿ ಪಾಳಯದಲ್ಲಿರುವ ಮೋರ್ಚಾಗಳ ಮೂಲಕ ಕೆಲಸ ಕಾರ್ಯಗಳು ನಡೆಯುತ್ತಿವೆ. ಆದರೆ, ರಾಯಣ್ಣ ಬ್ರಿಗೇಡ್ ಒಂದು ವೈಯಕ್ತಿಕ ಸಂಘಟನೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸ್ಪಷ್ಟಪಡಿಸಿದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಸಮಸ್ಯೆ ನಿಭಾಯಿಸಲು ಸಿದ್ದ: ಡಿ.ಕೆ.ಶಿವಕುಮಾರ್