Publish Date: Wed, 12 Oct 2016 (16:00 IST)
Updated Date: Wed, 12 Oct 2016 (16:03 IST)
ಸರಕಾರ ತನ್ನ ಯೋಜನೆಗಳನ್ನು ಜನರಿಗೆ ತಲುಪಿಸದೇ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡು ಅವರ ಆರೋಗ್ಯವನ್ನು ವಿಚಾರಿಸಿಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ರಾಜ್ಯದಲ್ಲಿ ಸಂಕಷ್ಟದ ಸ್ಥಿತಿ ಎದುರಾಗಿದೆ. ರೈತರಿಗೆ ಕೋಡಬೇಕಾಗಿರುವ ಪರಿಹಾರವನ್ನು ರಾಜ್ಯ ಸರಕಾರ ಸರಿಯಾಗಿ ನೀಡುತ್ತಿಲ್ಲ. ಅಂತ್ಯ ಸಂಸ್ಕಾರಕ್ಕೆಂದು ಬಡವರಿಗೆ ನೀಡುವ 5 ಸಾವಿರ ರೂಪಾಯಿ ಸಹಾಯ ದನವನ್ನು ಪಾವತಿ ಮಾಡುತ್ತಿಲ್ಲ. ಬಡವರು ಹಾಗೂ ರೈತರಿಗೆ ಸೇರಬೇಕಾದ ಹಣ ಸರಿಯಾಗಿ ಸಂದಾಯವಾಗದಿದ್ದರೇ ಅಕ್ಟೋಬರ್ 14 ರಂದು ರಾಜ್ಯಾದ್ಯಂತ ಧರಣಿ ಕೈಗೊಳ್ಳುವುದಾಗಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ