ಬೆಳಗಾವಿಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕುಮಾರನಂತೆ ಪೌರುಷ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.
ನಂಜನಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ದುರಾಡಳಿತ ಹಾಗೂ ಭ್ರಷ್ಟಾಚಾರದಿಂದ ರಾಜ್ಯದ ಜನತೆ ನೊಂದಿದ್ದಾರೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಭೀಮಾನಾಯ್ಕ್, ಚಿಕ್ಕರಾಯಪ್ಪ ಹಾಗೂ ಜಯಚಂದ್ರ ಬಂಧನದ ನಂತರ ಅವರು ಯಾರಿಗೆ ಹಣ ನೀಡಿದ್ದೇವೆ ಎಂದು ಬಾಯ್ಬಿಟ್ಟಿದ್ದಾರೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರ ಬಣ್ಣ ಬಯಲಾಗಲಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೈಕಮಾಂಡ್‌ಗೆ ಹಣ ನೀಡಿ ತಮ್ಮ ಅಧಿಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ಏನಾಗಲಿದೆ ಎನ್ನುವುದನ್ನು ರಾಜ್ಯದ ಜನತೆಯೇ ತಿಳಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ