Select Your Language

Notifications

webdunia
webdunia
webdunia
webdunia

ಕೊನೆಗೂ ನಿಗಮ, ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಇಲ್ಲಿದೆ ನೋಡಿ ಪಟ್ಟಿ

ಕೊನೆಗೂ ನಿಗಮ, ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ: ಇಲ್ಲಿದೆ ನೋಡಿ ಪಟ್ಟಿ
ಬೆಂಗಳೂರು , ಬುಧವಾರ, 2 ನವೆಂಬರ್ 2016 (17:11 IST)
ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ 21 ಶಾಸಕರು ಮತ್ತು 70 ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಾರೆ.
 
ಹುಮ್ನಾಬಾದ್ ಶಾಸಕರಾದ ರಾಜಶೇಖರ್ ಪಾಟೀಲ್‌ಗೆ ಭೂ ಸೇನಾ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಚಿವ ಸ್ಥಾನ ವಂಚಿತ ಶಾಸಕ ಬಾಬುರಾವ್ ಚಿಂಚನಸೂರ್‌ಗೆ ಗಡಿ ಪ್ರದೇಶಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ಸ್ಥಾನ ದೊರೆತಿದೆ.
 
ಅಫ್ಜಲಪುರ ಶಾಸಕ ಮಾಲೀಕಯ್ಯ ಗುತ್ತೆದಾರ್ ಅವರಿಗೆ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಸ್ಥಾನ, ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರಾಗಿ ಶಾಸಕ ಬಿ.ಆರ್.ಯಾವಗಲ್ ಅವರಿಗೆ ನೇಮಕ ಮಾಡಲಾಗಿದೆ. 
 
ಸ್ಲಮ್ ಬೋರ್ಡ್ ಅಧ್ಯಕ್ಷರಾಗಿ ಆರ್ ವಿ ದೇವರಾಜ್, ಆಹಾರ ನಿಗಮದ ಅಧ್ಯಕ್ಷರಾಗಿ ಎಂಟಿಬಿ ನಾಗರಾಜ್,  ಮೈಸೂರಿನ ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
 
ರಾಜ್ಯ ವಿದ್ಯುನ್ಮಾನ ನಿಗಮದ ಅಧ್ಯಕ್ಷರಾಗಿ ಡಿ ಸುಧಾಕರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾರದಾ ಮೋಹನ್ ಶೆಟ್ಟಿ, ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಂಪಯ್ಯ, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಸಂತ ಬಂಗೇರ ಅವರನ್ನು ನೇಮಕ ಮಾಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸಿಮಿ ಕಾರ್ಯಕರ್ತರ ಹತ್ಯೆ ಹಿಂದಿನ ರಾಜಕೀಯ ನಿಲ್ಲಿಸಿ