Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸರಕಾರ ಗೂಂಡಾ ಸರಕಾರ: ಕೆ.ಎಸ್.ಈಶ್ವರಪ್ಪ

ಸಿದ್ದರಾಮಯ್ಯ ಸರಕಾರ ಗೂಂಡಾ ಸರಕಾರ: ಕೆ.ಎಸ್.ಈಶ್ವರಪ್ಪ
ಬೆಂಗಳೂರು , ಬುಧವಾರ, 13 ಜುಲೈ 2016 (17:59 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಗೂಂಡಾ ಸರಕಾರದಂತೆ ವರ್ತಿಸುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ವಿಧಾನಸೌಧದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ರಾಜ್ಯ ಸರಕಾರ ಗೂಂಡಾ ಸರಕಾರದಂತೆ ವರ್ತಿಸುತ್ತಿದೆ. ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಜೆ.ಜಾರ್ಜ್‌ರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವವರೆಗೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ. ಮಾಜಿ ಗೃಹ ಸಚಿವ ಕ.ಜೆ.ಜಾರ್ಜ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸದೆ ತನಿಖೆ ನಡೆಸುತ್ತಿದ್ದಾರೆ. ಇದು ರಾಜ್ಯದಲ್ಲಿ ನಡೆದ ಪ್ರಪ್ರಥಮ ಘಟನೆಯಾಗಿದೆ ಎಂದು ಹೇಳಿದರು.
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಎಫ್‌ಐಆರ್ ಹಾಕಿ ಕ್ರಿಮಿನಲ್ ಕೇಸ್ ದಾಖಲಿಸಿ. ಕೆ.ಜೆ.ಜಾರ್ಜ್ ಅವರನ್ನು ಬಂಧಿಸಿ ಎಂದು ರಾಜ್ಯದ 6.5 ಕೋಟಿ ಜನರ ಅಪೇಕ್ಷೆಯಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಎಂದು ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿ ಆತ್ಮಹತ್ಯೆ ಪ್ರಕರಣ: ಸದನದಲ್ಲಿ ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ