ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ನ ಮುಖಂಡರಿಗೆ ಸಾವಿರ ಕೋಟಿಗೂ ಹೆಚ್ಚು ಹಣ ಸಂದಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್,ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಗೋವಿಂದರಾಜು ವಿರುದ್ಧ ವಾಗ್ದಾಳಿ ನಡೆಸಿದ ಅವರು, ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಪ್ರಮುಖ ಅಸ್ತ್ರವಾಗಿದೆ ಎಂದು ಲೇವಡಿ ಮಾಡಿದರು.
ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನವಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ಗೆ ಹಣ ಸಂದಾಯವಾದ ಬಗ್ಗೆ ತನಿಖೆಯ ವೇಳೆಯಲ್ಲಿ ಸಿಕ್ಕ ಡೈರಿಯಲ್ಲಿ ಬಹಿರಂಗವಾಗಿದೆ.
ಡೈರಿ ಸಿಕ್ಕಿರುವುದು ಹಿಂದೆಯೇ ನಿಮಗೆ ಗೊತ್ತಿರುವ ಸಂಗತಿ. ಡೈರಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳ್ತಾರೆ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.