Select Your Language

Notifications

webdunia
webdunia
webdunia
webdunia

ಕಾವೇರಿ ಕಣಿವೆಯ ರೈತರಿಗೆ ನೀರು ಹರಿಸಲು ಸರಕಾರ ಸಮ್ಮತಿ

ಕಾವೇರಿ ಕಣಿವೆಯ ರೈತರಿಗೆ ನೀರು ಹರಿಸಲು ಸರಕಾರ ಸಮ್ಮತಿ
ಬೆಂಗಳೂರು , ಸೋಮವಾರ, 3 ಅಕ್ಟೋಬರ್ 2016 (17:31 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರೈತರ ಬೆಳೆಗೆ ನೀರು ಬಿಡುವ ಕುರಿತಂತೆ ವಿಧಾನಸಭೆಯ ಉಭಯ ಸದನಗಳಲ್ಲಿ ಸರಕಾರದ ನಿರ್ಣಯ ಮಂಡನೆಯಾಗಿದೆ. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23 ರಂದು ಕರೆಯಲಾಗಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಲಾಗಿರುವ ನಿರ್ಣಯದಲ್ಲಿ ಸ್ವಲ್ಪ ಬದಲಾವಣೆ ಮಾಡಿ ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೆ ನೀರು ಬಿಡುವು ನಿರ್ಣಯವನ್ನು ರಾಜ್ಯ ಸರಕಾರ ಕೈಗೊಂಡಿದೆ. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 30 ರಂದು ನಡೆದ ವಿಚಾರಣೆಯಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ 6 ದಿನಗಳ ಕಾಲ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡಗಡೆ ಮಾಡುವಂತೆ ಹಾಗೂ ಕೇವಲ ನಾಲ್ಕು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮತ್ತೆ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂಕೋರ್ಟ್ ಕಾವೇರಿ ವಿಷಯದಲ್ಲಿ ರಾಜ್ಯ ಬಲಿಪಶು: ಶೆಟ್ಟರ್