Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರನ್ನು ಶಾಶ್ವತವಾಗಿ ಜೈಲಿಗೆ ಕಳಿಸ್ತೇನೆ: ಯಡಿಯೂರಪ್ಪ ಗುಡುಗು

cm siddaramayya i will send you to jail for loniterm said yeddyurappa
ಗುಂಡ್ಲುಪೇಟೆ , ಬುಧವಾರ, 22 ಮಾರ್ಚ್ 2017 (18:32 IST)
ಸಿಎಂ ಸಿದ್ದರಾಮಯ್ಯರನ್ನು ಶಾಶ್ವತವಾಗಿ ಜೈಲಿಗೆ ಕಳಿಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ಉಪ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಯೊಂದು ಭಾಷಣದಲ್ಲಿ ನನ್ನನ್ನು ಪದೇ ಪದೇ ಜೈಲಿಗೆ ಹೋಗಿ ಬಂದವರು ಎಂದು ಹೀಯಾಳಿಸುತ್ತಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮನ್ನು ಶಾಶ್ವತವಾಗಿ ಜೈಲಿಗೆ ಕಳುಹಿಸುತ್ತೇನೆ ಎಂದು ಅಬ್ಬರಿಸಿದ್ದಾರೆ.
 
ಉಪಚುನಾವಣೆಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಗೆಲ್ಲುವ ಕನಸನ್ನು ಸಿದ್ದರಾಮಯ್ಯ ಕಾಣುತ್ತಿದ್ದಾರೆ. ಆದರೆ, ಕೇಂದ್ರ ಸರಕಾರದಲ್ಲಿ ನಮ್ಮ ಸರಕಾರವಿದೆ ಎನ್ನುವುದನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
 
ರಾಜ್ಯದ ಬೊಕ್ಕಸನ್ನು ಖಾಲಿ ಮಾಡಿ ಭ್ರಷ್ಟಾಚಾರಿಗಳಿಗೆ ಮಣೆಹಾಕಿರುವ ಸಿದ್ದರಾಮಯ್ಯನವರೇ, ನಿಮ್ಮ ಸಂಪೂರ್ಣ ವಿವರಗಳ ಜಾತಕ ನನ್ನ ಬಳಿಯಿದೆ. ಎಲ್ಲಾ ಹಗರಣಗಳ ತನಿಖೆ ನಡೆಸಿ ಮುಂಬರುವ ದಿನಗಳಲ್ಲಿ ಶಾಶ್ವತವಾಗಿ ನಿಮ್ಮನ್ನು ಜೈಲಿಗೆ ಕಳುಹಿಸುವ ವ್ಯವಸ್ಥೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎಸ್.ಎಂ.ಕೃಷ್ಣರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಲಾಗುವುದು: ಅಮಿತ್ ಶಾ