ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಇರುವ ಜನರು ಅವರನ್ನು ದಾರಿ ತಪ್ಪಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಆಡಳಿತ ಯಂತ್ರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಆಡಳಿತ ಯಂತ್ರ ವಿಫಲಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಮತದಾರರು ಬಿಜೆಪಿ ಪಕ್ಷದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು.
ಮುಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರಕಾರ ರಚನೆಯಾಗಬೇಕು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕೇಂದ್ರ ಸಚಿವ ಸದಾನಂದ ಗೌಡ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.