ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಲಿತ ಸಿಎಂ ಭಾಗ್ಯ ನೀಡಲಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ಪಿ.ರಾಜಶೇಖರನ್ ಮತ್ತೆ ದಲಿತ ಮುಖ್ಯಮಂತ್ರಿ ವಿಚಾರ ಪ್ರಸ್ತಾಪ ಮಾಡಿದ್ದಾರೆ.
ಬೆಂಗಳೂರಿನ ಕೆಪಿಎಸ್‌ಸಿ ಕಛೇರಿಯಲ್ಲಿ ಇಂದು ರಾಜೀವ್ ಗಾಂಧಿಯವರ 25 ನೇಯ ಪುಣ್ಯ ಸ್ಮರಣೆ ಕಾರ್ಯಕ್ರಮ ಜರುಗಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಮ್.ಪಿ.ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಜನತೆಗೆ ಸಾಕಷ್ಟು ರೀತಿಯ ಭಾಗ್ಯಗಳನ್ನು ನೀಡಿದ್ದಾರೆ. ಇದೀಗ, ಕೆಪಿಎಸ್‌ಸಿ ಅಧ್ಯಕ್ಷ ಜಿ.ಪರಮೇಶ್ವರ ಅವರಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟು ದಲಿತ ಸಿಎಂ ಭಾಗ್ಯವನ್ನು ನೀಡಲಿ ಎಂದು ಹೇಳಿದ್ದಾರೆ.
ದಲಿತರು ಮುಖ್ಯಮಂತ್ರಿಯಾಗಬೇಕು ಎಂದು ದಿವಂಗತ ರಾಜೀವ ಗಾಂಧಿ ಅವರು ಕನಸು ಹೊತ್ತಿದ್ದರು. ಇಗ ದಲಿತರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅವರ ಕನಸನ್ನು ನನಸು ಮಾಡಬೇಕಾಗಿದೆ ಎಂದು ಎಮ್.ಪಿ.ರಾಜಶೇಖರನ್ ಹೇಳಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.