Webdunia - Bharat's app for daily news and videos

Install App

ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ: ನಾರಿಮನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 29 ಸೆಪ್ಟಂಬರ್ 2016 (20:17 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
 
ಕಾವೇರಿ ಹೋರಾಟದ ಕುರಿತು ಮುಂದಿನ ಕಾರ್ಯತಂತ್ರ ರೂಪಿಸುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಫಾಲಿ ನಾರಿಮನ್ ಅವರೊಂದಿಗೆ ಚರ್ಚೆ ನಡೆಸಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆದ ಉಭಯ ರಾಜ್ಯಗಳ ನಡುವಿನ ಸಂಧಾನ ಸಭೆಯಲ್ಲಿ ರಾಜ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವಾಸ ವ್ಯಕ್ತಪಡಿಸಿದ್ದರು. 
 
ಆದರೆ, ಇಂದಿನ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ ಕಾವೇರಿ ವಿವಾದ ಮತ್ತೆ ಸುಪ್ರೀಂ ಅಂಗಳದಲ್ಲೇ ಅಂತ್ಯ ಕಾಣಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುವ ಅರ್ಜಿ ವಿಚಾರಣೆಯಲ್ಲಿ ಯಾವ ರೀತಿಯ ಕಾರ್ಯತಂತ್ರ ರೂಪಿಸಬೇಕು ಎನ್ನುವ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments