Select Your Language

Notifications

webdunia
webdunia
webdunia
webdunia

ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ , ಶುಕ್ರವಾರ, 9 ಡಿಸೆಂಬರ್ 2016 (12:50 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು. 
 
ರಾಜ್ಯಕ್ಕೆ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಹಾರ ಕಾಮಗಾರಿಗೆ ಕೇಂದ್ರದಿಂದ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಿಕೊಂಡರು.
 
ಬರ ಪರಿಹಾರ ಕಾಮಗಾರಿಯನ್ನು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕೈಗೊಂಡಿದ್ದು, ಕುಡಿಯವ ನೀರು, ಜಾನುವಾರಗಳಿಗೆ ಮೇವು ಸೇರಿದಂತೆ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ರಾಜನಾಥ್ ಸಿಂಗ್ ಅವರಿಗೆ ವಿವರಣೆ ನೀಡಿದರು. 
 
ಈ ವೇಳೆ ಕಾನೂನು ಸಚಿವ ಚಿ.ಬಿ.ಜಯಚಂದ್ರ ಹಾಗೂ ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಅಪ್ಪಾಜಿ ನಾಡಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇವಲ ರೂ. 348ಕ್ಕೆ ’ಐಡಿಯಾ’ ಅನಿಯಮಿತ ಕರೆಗಳು