Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಎಸ್‌.ಎಂ.ಕೃಷ್ಣ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಕಾವೇರಿ ವಿವಾದ: ಎಸ್‌.ಎಂ.ಕೃಷ್ಣ ಭೇಟಿಯಾದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 22 ಸೆಪ್ಟಂಬರ್ 2016 (12:04 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸದಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ನನ್ನ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.
 
ಕಾವೇರಿ ನದಿ ನೀರು ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸುತ್ತಿದ್ದಾರೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಂಡಿರುವ ದಿಟ್ಟ ನಿರ್ಧಾರಕ್ಕೆ ಸದಾ ನನ್ನ ಬೆಂಬಲವಿರುತ್ತದೆ ಎಂದು ಹೇಳಿದರು.
 
ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರಕಾರದ ನಿರ್ಧಾರದಿಂದ ಹಿಂಜರಿಯಬೇಡಿ. ಕಾವೇರಿ ವಿಚಾರದಲ್ಲಿ ಎಲ್ಲರೂ ಐಕ್ಯತೆಯಿಂದಿರಬೇಕು. ನೀರಿಲ್ಲದೆ ಕಂಗಾಲಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಿ ಹಾಗೂ ಕಾವೇರಿ ಹೋರಾಟದಲ್ಲಿ ಬಂಧನಕೊಳ್ಳಗಾಗಿರುವ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಲಿ ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿಡಿಯೋ: ಮೊಬೈಲ್ ನೋಡುತ್ತಾ ಡ್ರೈವ್ ಮಾಡಿ ಮಕ್ಕಳ ಮೇಲೆ ಕಾರ್ ಹರಿಸಿದಳು, ಮುಂದೇನಾಯ್ತು?