ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈಮಾನಿಕ ಸಮೀಕ್ಷೆಯಿಂದ ಸಮಸ್ಯೆ ಪರಿಹಾರವಾಗಲ್ಲ. ಇದರಿಂದ ಸಂತ್ರಸ್ಥರ ನೋವು ಅರ್ಥವಾಗಲ್ಲ. ಸರಕಾರ ಕೂಡಲೇ ರೈತರ ಬೆಳೆ ನಷ್ಟಕ್ಕೆ ಪರಿಹಾರ ಘೋಷಿಸಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
ಪ್ರವಾಹ ಪೀಡಿತ ಬೀದರ್ ಜಿಲ್ಲೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸುತ್ತಿದ್ದಾರೆ. ಹೀಗಾಗಿ ಸಿಐಡಿ ತನಿಖೆಯನ್ನು ಇಷ್ಟು ಬೇಗ ಮುಗಿಸಿದ್ದಾರೆ ಎಂದು ಹೇಳಿದರು.
ಈ ಭಾಗದಲ್ಲಿ ಸಾಕಷ್ಟು ಪ್ರಮಾಣದ ಬೆಳೆ ನಷ್ಟವಾಗಿದೆ. ರೈತರ ನೋವು ಅಧಿಕವಾಗಿದೆ. ಕೂಡಲೇ ಬೆಳೆ ನಷ್ಟ ಪರಿಹಾರವನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್‌ಗೆ ಸಚಿವ ಕೆ.ಜೆ.ಜಾರ್ಜ್ ಎಂದರೆ ಎಟಿಎಂ ಇದ್ದಂತೆ. ಆದ್ದರಿಂದಲೇ ಜಾರ್ಜ್‌ಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ