Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಒಣ ಪ್ರತಿಷ್ಠೆ ಬಿಟ್ಟು ಚರ್ಚೆಗೆ ಮುಂದಾಗಲಿ: ಯಡಿಯೂರಪ್ಪ

ಸಿಎಂ ಸಿದ್ದರಾಮಯ್ಯ ಒಣ ಪ್ರತಿಷ್ಠೆ ಬಿಟ್ಟು ಚರ್ಚೆಗೆ ಮುಂದಾಗಲಿ: ಯಡಿಯೂರಪ್ಪ
ನವದೆಹಲಿ , ಬುಧವಾರ, 27 ಜುಲೈ 2016 (13:06 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಣ ಪ್ರತಿಷ್ಠೆ ಬಿಟ್ಟು ಸಾರಿಗೆ ನೌಕರರ ಸಂಘಟನೆಗಳ ಜೊತೆ ಮಾತನಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಗ್ರಹಿಸಿದ್ದಾರೆ.
 
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯ ವ್ಯಾಪ್ತಿ ಮುಷ್ಕರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು. 
 
ಸಾರಿಗೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಒಣ ಪ್ರತಿಷ್ಠೆಯನ್ನು ಪಕ್ಕಕ್ಕಿಟ್ಟು ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಲಿ ಎಂದು ಆಗ್ರಹಿಸಿದರು.
 
ಸಾರಿಗೆ ನೌಕರರ ಬೇಡಿಕೆಯಂತೆ ವೇತನ ಹೆಚ್ಚಿಸಲು ಸಾಧ್ಯವಿಲ್ಲ. ಆದರೆ, ನೌಕರರೊಂದಿಗೆ ಸೌಹಾರ್ಧಯುತ ಬಾಂಧವ್ಯ ಬೆಳಸಿಕೊಳ್ಳಬೇಕು. ಅವರೊಂದಿಗೆ ಚರ್ಚೆಗೆ ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಜಿಎಸ್‌ಟಿ ಮಸೂದೆ ಅಂಗೀಕಾರ ನಿರೀಕ್ಷೆ: ಸಂವೇದಿ ಸೂಚ್ಯಂಕ ಚೇತರಿಕೆ