Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಹಠಮಾರಿ ಧೋರಣೆ ಬಿಡಲಿ: ಕೆ.ಎಸ್.ಈಶ್ವರಪ್ಪ

Webdunia
ಮಂಗಳವಾರ, 26 ಜುಲೈ 2016 (18:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಠಮಾರಿ ಧೋರಣೆಯನ್ನು ಬಿಟ್ಟು ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಅನಿರ್ದಿಷ್ಟಾವದಿ ಮುಷ್ಕರಕ್ಕೆ ರಾಜ್ಯ ಸರಕಾರವೇ ನೇರ ಹೊಣೆ. ರಾಜ್ಯ ಸರಕಾರ ನಿದ್ರಾವಸ್ಥೆಯಲಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಡಿಸೇಲ್ ದರ ಕಡಿಮೆಯಾದಾಗ ಪ್ರಯಾಣ ದರವನ್ನು ಕಡಿಮೆ ಮಾಡಿಲ್ಲ. ಖಾಸಗಿ ಬಸ್‌ ನಡೆಸುವವರೆಗೆ ಲಾಭ ಆಗುತ್ತಿದೆ. ಆದರೆ, ಸರಕಾರಿ ಸಾರಿಗೆ ಇಲಾಖೆಗೆ ಯಾಕೆ ಲಾಭವಾಗುತ್ತಿಲ್ಲ. ಇದು ರಾಜ್ಯ ಸರಕಾರದ ಆಡಳಿತ ವೈಫಲ್ಯವೇ ಕಾರಣ ಎಂದು ತಿಳಿಸಿದರು.
 
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡುತ್ತಿದ್ದಾರೆ ಎಂದು ಗೊತ್ತಿದ್ದರು ಕೂಡಾ ಮುಷ್ಕರಕ್ಕೆ ಅವಕಾಶ ಮಾಡಿಕೊಟ್ಟಿದ್ದೀರಿ. ರಾಜ್ಯ ಸರಕಾರ ಹಠಮಾರಿ ಧೋರಣೆಯನ್ನು ನಿಲ್ಲಿಸಬೇಕು. ಸಾರಿಗೆ ನೌಕರರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರು 10 ಪ್ರತಿಶತಗಿಂತ ಹೆಚ್ಚು ವೇತನ ನೀಡಲು ಸಾಧ್ಯವಿಲ್ಲ ಎಂದು ಹೇಳುವುದು ಸರಿಯಲ್ಲ. ಈ ಕುರಿತು ಸರಕಾರ ಹಾಗೂ ಸಾರಿಗೆ ನೌಕರರ ಸಂಘಟನೆಗಳು ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

Operation Sindoor: ಸುದ್ದಿಗೋಷ್ಠಿಯಲ್ಲಿ ಘರ್ಜಿಸಿದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್‌ ಹಿನ್ನೆಲೆ ಇಲ್ಲಿದೆ

ಸೇನೆಗೆ ಮೊದಲೇ ಫ್ರೀ ಹ್ಯಾಂಡ್ ಕೊಟ್ಟಿದ್ದರೆ ಇಷ್ಟೆಲ್ಲಾ ಆಗ್ತಾನೇ ಇರ್ಲಿಲ್ಲ: ರಾಮಲಿಂಗಾ ರೆಡ್ಡಿ

Operation Sindoor: ಸೇನಾ ಕಾರ್ಯಾಚರಣೆ ಯಶಸ್ವಿ ಬೆನ್ನಲ್ಲೆ ಸರ್ವ ಪಕ್ಷಗಳ ಸಭೆ ಕರೆದ ಕೇಂದ್ರ

Operation Sindoor: ನಮ್ಮ ಸೇನೆ ನಮ್ಮ ಹೆಮ್ಮೆ, ಕೇಂದ್ರಕ್ಕೆ ಪೂರ್ಣ ಬೆಂಬಲ ಎಂದ ಸಚಿವ ಜಮೀರ್‌ ಅಹಮ್ಮದ್‌

ಮುಂದಿನ ಸುದ್ದಿ
Show comments