Publish Date: Fri, 23 Dec 2016 (18:32 IST)
Updated Date: Fri, 23 Dec 2016 (18:35 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ದೆಹಲಿಗೆ ಬರುವುದಿಲ್ಲ. ಕಾಟಾಚಾರಕ್ಕೆ ದೆಹಲಿಗೆ ಬರುತ್ತಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ದೆಹಲಿಗೆ ಗಂಭೀರವಾದ ವಿಚಾರ ಹಿಡಿದು ಬರುವುದಿಲ್ಲ. ಅವರು ರಾಜ್ಯದ ಮುಖ್ಯಮಂತ್ರಿ ಎನ್ನುವುದನ್ನು ಮರೆತು ಕಾಂಗ್ರೆಸ್ ವಕ್ತಾರರಂತೆ ಮಾತನಾಡುತ್ತಿದ್ದಾರೆ ಎಂದರು
ಪ್ರಧಾನಿ ಅವರು ಎಲ್ಲಾ ರಾಜ್ಯಗಳನ್ನು ಸಮಾನವಾಗಿ ಕಂಡು ಅಭೃವೃದ್ಧಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ರಾಜಕಾರಣ ಮಾಡಲ್ಲ ಎಂದು ಕಿಡಿಕಾರಿದರು.
ಅಭಿವೃದ್ಧಿಯ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಟ್ ನರೇಂದ್ರ ಮೋದಿ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ