Webdunia - Bharat's app for daily news and videos

Install App

ಡೈರಿ ವಿವಾದ: ಮೌನವ್ರತಕ್ಕೆ ಶರಣಾದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 24 ಫೆಬ್ರವರಿ 2017 (13:27 IST)
ಡೈರಿಯಲ್ಲಿರುವ ಹೆಸರುಗಳು ಬಹಿರಂಗವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ. ಮನೆಗೆ ಬಂದ ಕಾಂಗ್ರೆಸ್ ನಾಯಕರು ಸಿಎಂ ದರ್ಶನ ಸಾಧ್ಯವಾಗದೆ ಮರಳುತ್ತಿದ್ದಾರೆ.
 
ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ಮನೆಯಲ್ಲಿ ದೊರೆತ ಡೈರಿಯಲ್ಲಿ ಕಾಂಗ್ರೆಸ್ ಪಕ್ಷದ ಹಲವು ಘಟಾನುಘಟಿ ನಾಯಕರ ಹೆಸರುಗಳು ಬಹಿರಂಗವಾಗಿವೆ.
 
ಇಂದು ತಮ್ಮ ಅಧಿಕೃತ ನಿವಾಸದಲ್ಲಿಯೇ ಇರುವ ಸಿಎಂ ಸಿದ್ದರಾಮಯ್ಯ, ತಮ್ಮ ಕಾಣಲು ಬಂದಿದ್ದ ಸಂಸದರು, ಶಾಸಕರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ.
 
ಹಿರಿಯ ಕಾಂಗ್ರೆಸ್ ಮುಖಂಡರ ವರ್ತನೆಯೂ ಸಿಎಂ ಸಿದ್ದರಾಮಯ್ಯನವರಿಗೆ ಅಸಮಾಧಾನ ಮೂಡಿಸಿದೆ ಎನ್ನಲಾಗಿದೆ. ಪಕ್ಷವನ್ನು ವಿನಾಕಾರಣ ಬಲಿಪಶುವಾಗಿಸುತ್ತಿದ್ದರೂ ಹಿರಿಯ ಕಾಂಗ್ರೆಸ್ ಸಚಿವರು ಪಕ್ಷದ ಪರ ಹೇಳಿಕೆ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments