Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯನವರ ಎರಡನೆಯ ಪುತ್ರ ರಾಜಕೀಯಕ್ಕೆ?

ಕನ್ನಡ ಪ್ರಾದೇಶಿಕ
ಬೆಂಗಳೂರು , ಸೋಮವಾರ, 22 ಆಗಸ್ಟ್ 2016 (10:07 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಜೇಷ್ಠಪುತ್ರ ರಾಕೇಶ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಅವರ ಎರಡನೆಯ ಪುತ್ರ ಡಾ.ಯತೀಂದ್ರ ಅವರನ್ನು ರಾಜಕೀಯಕ್ಕೆ ಬರುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
 
ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಡಾ.ಯತೀಂದ್ರ ಅವರನ್ನು ರಾಜಕೀಯಕ್ಕೆ ಕರೆತರಲು ಒತ್ತಾಯಿಸುತ್ತಿದ್ದು, ಕಳೆದ ಎರಡು ದಿನಗಳಿಂದ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.  
 
ಜುಲೈ 13 ರಂದು 39 ನೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ರಾಕೇಶ್ ಸಿದ್ದರಾಮಯ್ಯ, ಸ್ನೇಹಿತರೊಂದಿಗೆ ಬೆಲ್ಜಿಯಂ ಪ್ರವಾಸ ಕೈಗೊಂಡಿದ್ದರು. ಬೆಲ್ಜಿಯಂ ಪ್ರವಾಸಕ್ಕೆ ತೆರಳುವ ಮುನ್ನವೆ ಯಕೃತ್‌ (ಲಿವರ್‌) ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರವಾಸದ ವೇಳೆ ಅವರ ಆರೋಗ್ಯ ಹದಗೆಟ್ಟಿತ್ತು. ಅವರನ್ನು ಬ್ರೂಸೆಲ್ಸ್ ಯೂನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮ, ಜಾತಿ ಹೆಸರಲ್ಲಿ ಒಡಕನ್ನುಂಟು ಮಾಡುವುದು ಅಪಾಯಕಾರಿ: ಖರ್ಗೆ