Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ನೀನು ಸ್ವಾರ್ಥಿ: ವಿ.ಶ್ರೀನಿವಾಸ್ ಪ್ರಸಾದ್ ಆಕ್ರೋಶ

Webdunia
ಶನಿವಾರ, 26 ನವೆಂಬರ್ 2016 (15:16 IST)
ಸಿಎಂ ಸಿದ್ದರಾಮಯ್ಯ ನೀನು ಸ್ವಾರ್ಥಿ. ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜನಂತೆ ಈ ರೀತಿ ನೀನು ರಾಜ್ಯದ ಮುಖ್ಯಮಂತ್ರಿಯಾಗಿದ್ದೀಯಾ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
ನಗರದಲ್ಲಿ ಸ್ವಾಭಿಮಾನ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿನ್ನ ಬೆಳೆಸಿದವರು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರು. ಆದರೆ, ನೀನು ಸ್ವಾರ್ಥಿಯಾದೆ ಎಂದು ಏಕವಚನದಲ್ಲಿಯೇ ಸಿಎಂ ವಿರುದ್ಧ ರೋಷಾವೇಶ ವ್ಯಕ್ತಪಡಿಸಿದರು.
 
ಸಿದ್ದರಾಮಯ್ಯ ನೀನು ಸ್ವಾರ್ಥಿ, ಕರ್ನಾಟಕದ ಬಾವಿಯಲ್ಲಿ ವಟಗುಟ್ಟುತ್ತಿರುವ ಕಪ್ಪೆ ನೀನು. ದೆಹಲಿ ರಾಜಕೀಯ ಸಾಗರದಲ್ಲಿ 25 ವರ್ಷ ಈಜಿ ಬಂದವನು ನಾನು. ಕೇವಲ ಅಸೂಯೆ ದುರುದ್ದೇಶದಿಂದ ನೀನು ನನ್ನನ್ನು ಸಂಪುಟದಿಂದ ಕೈಬಿಟ್ಟೆ ಎಂದು ಗುಡುಗಿದರು. 
 
ಕಳೆದ ಐದು ದಶಕಗಳಿಂದ ನಾನು ರಾಜಕೀಯದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯನವರನ್ನು ಸಂಕಷ್ಟದ ಸಂದರ್ಭದಲ್ಲಿ ಬೆಂಬಲಿಸಿದ್ದೇನೆ. ಆದರೆ, ಯಾವುದೇ ಕಾರಣ ಹೇಳದೆ ಸಚಿವ ಸಂಪುಟದಿಂದ ನನ್ನನ್ನು ಕೈಬಿಡಲಾಯಿತು ಎಂದು ಗುಡುಗಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಅವರ ಸ್ವಾರ್ಥತನದಿಂದಾಗಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಮಾಜಿ ಸಚಿವ ವಿ,ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments