Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ: ಕೆ.ಎಸ್.ಈಶ್ವರಪ್ಪ

ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕ: ಕೆ.ಎಸ್.ಈಶ್ವರಪ್ಪ
ಬೆಂಗಳೂರು , ಗುರುವಾರ, 14 ಜುಲೈ 2016 (19:28 IST)
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕವಾಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.
 
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜೊತೆ ಹತ್ತಿರದ ಸಂಬಂಧವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಏನಾದ್ರೂ ತೊಂದರೆಯಾದರೆ ಅವರ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ನಂಬಿಕೆಯ ಮೇಲೆ ಕೆ.ಜೆ.ಜಾರ್ಜ್ ಅವರನ್ನು ಸಂಪುಟದಿಂದ ಕೈಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಕ್ಕೆ ಶರಣಾಗುವ ಮುನ್ನ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ. ಡೆತ್‌ನೋಟ್ ಬರೆದಿದ್ದಾರೆ. ಇಷ್ಟು ಸಾಕ್ಷಿ ಸಾಕಲ್ಲವೇ. ಆದರೂ, ಸರಕಾರ ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಭಂಡ ಸರಕಾರವನ್ನು ನೋಡಿಲ್ಲ ಎಂದು ತಿಳಿಸಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ ಎಂದು ಇಡೀ ರಾಜ್ಯಕ್ಕೆ ಗೊತ್ತು. ಅವರದೇ ಪಕ್ಷದ ನಾಯಕರಾಗಿರುವ ಜನಾರ್ಧನ ಪೂಜಾರಿಯವರೂ ಸಹ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್‌.ಎಮ್‌.ಕೃಷ್ಣ ಅವರು ಸಹ ಪರೋಕ್ಷವಾಗಿ ರಾಜೀನಾಮೆ ಪಡೆಯಿರಿ ಎಂದು ಸೂಚನೆ ನೀಡಿದ್ದಾರೆ.
 
ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಗಣಪತಿ ಕುಟುಂಬಕ್ಕೆ ಸಾಂತ್ವನ ಹೇಳಬಹುದಾಗಿತ್ತು. ಪ್ರಕರಣ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರಿಂದ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿದರೆ ನ್ಯಾಯಾಂಗ ತನಿಖೆಗೆ ನೀಡಿದ್ದಾರೆ ಎಂದು ಆರೋಪಿಸಿದರು.
 
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಭಂಡ ಸರಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕವಾಗುತ್ತದೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಿಲ್ಲ ಎಂದು ಈಗಾಗಲೇ ರಾಜ್ಯದ ಜನತೆ ತೀರ್ಮಾನಿಸಿದೆ. 2018 ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಶ್ಮಿರದಲ್ಲಿ ಹಿಂಸಾಚಾರ ಹೆಚ್ಚಿಸಲು 100 ಕೋಟಿ ಹವಾಲಾ ಹಣ ರವಾನೆ: ಗುಪ್ತಚರ ದಳ