ಬೆಂಗಳೂರು: 12 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ಧರಾಮಯ್ಯ, ಜನತೆಗೆ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ. ಜನತೆಯ ಪರವಾದ ಬಜೆಟ್ ಇದಾಗಲಿದೆ ಎಂದು ಸುಳಿವು ನೀಡಿದ್ದಾರೆ.
ರಾಜ್ಯದ ಜನತೆಯನ್ನು ನೆನೆಯುತ್ತಾ ಬಜೆಟ್ ಮಂಡಿಸುತ್ತಿದ್ದೇನೆ. ಸರ್ವರಿಗೂ ಒಳಿತಾಗುವ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಅಲ್ಲದೆ ಮತ್ತೊಂದು ಬಜೆಟ್ ಮಂಡಿಸಲು ಅವಕಾಶ ನೀಡಿದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.
ಇದೇ ವೇಳೆ ಬಜೆಟ್ ಮಂಡನೆಗೂ ಮೊದಲು ಮಂತ್ರಿಮಂಡಲದ ಅನುಮೋದನೆ ಪಡೆಯಲು ಸಿಎಂ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಬಾರಿಯ ಬಜೆಟ್ ಗಾತ್ರ 2 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ ಇನ್ನಷ್ಟು ‘ಭಾಗ್ಯ’ ಗಳನ್ನು ಜನತೆಗೆ ನೀಡುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ