Select Your Language

Notifications

webdunia
webdunia
webdunia
webdunia

ಯಲ್ಲಾಪುರ ಲಾರಿ ಅಪಘಾತದಲ್ಲಿ ಮಡಿದವರಿಗೆ ಪರಿಹಾರ ಘೋಷಿಸಿದ ಸಿಎಂ ಎಷ್ಟೆಂದು ಹೇಳಲೇ ಇಲ್ಲ

Siddaramaiah

Krishnaveni K

ಕಾರವಾರ , ಬುಧವಾರ, 22 ಜನವರಿ 2025 (11:25 IST)
ಕಾರವಾರ: ಯಲ್ಲಾಪುರದಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿದ್ದು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಸಿಎಂ ಪರಿಹಾರ ಘೋಷಿಸಿದ್ದಾರೆ, ಆದರೆ ಎಷ್ಟೆಂದು ಹೇಳಿಲ್ಲ.

ಯಲ್ಲಾಪುರದಲ್ಲಿ ಇಂದು ತರಕಾರಿ ಲಾರಿ ಪಲ್ಟಿಯಾಗಿ ಅದರಲ್ಲಿ ಪ್ರಯಾಣ ಮಾಡುತ್ತಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಉಳಿದವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ಳಂ ಬೆಳಿಗ್ಗೆ ನಡೆದ ಈ ಅಪಘಾತ ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ.

ವಿಪರೀತ ಮಂಜು ಇದ್ದಿದ್ದರಿಂದ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಿಸದೇ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಲಾರಿಯಲ್ಲಿ ಕುಮಟಾ ಕಡೆಗೆ ಸುಮಾರು 25 ಕ್ಕೂ ಹೆಚ್ಚು ಮಂದಿ ಪ್ರಯಾಣ ಮಾಡುತ್ತಿದ್ದರು. ಎಲ್ಲರೂ ಸವಣೂರಿನವರು ಎನ್ನಲಾಗಿದೆ.

ಇದೀಗ ದುರಂತದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ‘ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ. ಮಡಿದವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಅಷ್ಟೇ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಭರವಸೆ ನೀಡಿದ್ದಾರೆ. ಪರಿಹಾರ ಮೊತ್ತ ನಂತರ ಘೋಷಿಸುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ರಾಜ್ಯದಲ್ಲಿ ಮುಂದಿನ ಐದು ದಿನ ಎಚ್ಚರಿಕೆ ಅಗತ್ಯ