Publish Date: Fri, 16 Jun 2017 (15:29 IST)
Updated Date: Fri, 16 Jun 2017 (15:31 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧನೆ ಎಂದರೆ ದೇಶದಲ್ಲಿಯೇ ರಾಜ್ಯವನ್ನು 3ನೇ ಭ್ರಷ್ಟ ರಾಜ್ಯವನ್ನಾಗಿಸಿರುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಬರಗಾಲ ಪೀಡಿತ ಪ್ರದೇಶಗಳ ಪ್ರವಾಸದಲ್ಲಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೂ ರೈತರ ಸಾಲ ಮನ್ನಾ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆಯಿಲ್ಲದಂತಾಗಿದ್ದು ಆತಂಕದ ಸ್ಥಿತಿಯಲ್ಲಿದ್ದಾರೆ. ಭ್ರಷ್ಟ ಅಧಿಕಾರಿಗಳು ರಾಜ್ಯವನ್ನು ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.
ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕೇವಲ ವಿಧಾನಪರಿಷತ್ ಚುನಾವಣೆಗೆ ಮಾತ್ರ ಮೀಸಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಸೀಮಿತವಾಗಿಲ್ಲ. ಬಿಜೆಪಿ ಯಾವುದೇ ಪಕ್ಷದೊಂದಿಗೆ ಮೈತಿ ಮಾಡಿಕೊಳ್ಳಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.