Select Your Language

Notifications

webdunia
webdunia
webdunia
webdunia

ಅಕ್ರಮ ಮದ್ಯ ಸೇವಿಸಿ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್

ಅಕ್ರಮ ಮದ್ಯ ಸೇವಿಸಿ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್

Sampriya

ಚೆನ್ನೈ , ಗುರುವಾರ, 20 ಜೂನ್ 2024 (17:50 IST)
Photo Courtesy X
ಚೆನ್ನೈ: ರಾಜ್ಯದ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿದ ಪರಿಣಾಮ ಮೃತರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್

ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50,000 ರೂ. ಪರಿಹಾರವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಮೂಲಗಳ ಪ್ರಕಾರ ಒಟ್ಟು 107 ಜನರನ್ನು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 59 ಜನರನ್ನು ಸೇಲಂ, ವಿಲ್ಲುಪುರಂ ಮತ್ತು ಪುದುಚೇರಿಯಂತಹ ಇತರ ಸ್ಥಳಗಳ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಉಲ್ಲೇಖಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ಅಲ್ಲದೆ ಘಟನೆ ಕುರಿತು ವರದಿ ಸಲ್ಲಿಸುವಂತೆ ತನಿಖಾ ಆಯೋಗಕ್ಕೆ ಆದೇಶಿಸಿದ್ದಾರೆ. ಈ ಮಧ್ಯೆ, ಸ್ಟಾಲಿನ್ ನೇತೃತ್ವದ ಡಿಎಂಕೆ ತಮಿಳುನಾಡು ಸರ್ಕಾರದ ವಿರುದ್ಧ ಜೂನ್ 22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಘೋಷಣೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಕ್ಕಾದಲ್ಲಿ ಬಿಸಿಗಾಳಿ: ಮೃತ 562 ಹಜ್ ಯಾತ್ರಿಗಳಲ್ಲಿ 68 ಮಂದಿ ಭಾರತದವರು