ಇಸ್ರೇಲ್‌ನಲ್ಲಿರುವ ಕನ್ನಡಿಗರ ಜೊತೆ ಸಿಎಂ ಮಾತುಕತೆ

Webdunia
ಗುರುವಾರ, 12 ಅಕ್ಟೋಬರ್ 2023 (14:47 IST)
ಇಸ್ರೇಲ್‌ನಲ್ಲಿರುವ ಕನ್ನಡಿಗರ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.. ಇಸ್ರೇಲ್​​​ನಲ್ಲಿ ಸಿಲುಕಿರುವ ಬನಹಟ್ಟಿಯ ಪೂಜಾ ಕುಟುಂಬಸ್ಥರಿಗೆ ಸಿದ್ದರಾಮಯ್ಯ ಅವರು ಧೈರ್ಯ ತುಂಬಿದರು. ನಿನ್ನೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಪೂಜಾ ಕುಟುಂಬಸ್ಥರಿಗೆ ಧೈರ್ಯ ಹೇಳುವಂತೆ ಮನವಿ ಮಾಡಿದರು. ತಮ್ಮ ಮೊಬೈಲ್‌ನಲ್ಲೇ ಪೂಜಾ ತಾಯಿಗೆ ಕರೆ ಮಾಡಿಕೊಟ್ಟು ಮಾತನಾಡಿಸಿದರು. ಪೂಜಾ ತಾಯಿಯೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪೂಜಾ ಅವರೊಂದಿಗೆ ಮಾತನಾಡಿದ್ದೇನೆ, ಅವರು ಸುರಕ್ಷಿತವಾಗಿದ್ದಾರೆ. ನೀವು ಯಾವುದೇ ಆತಂಕಕ್ಕೊಳಗಾಗಬೇಡಿ ಎಂದು ಪೂಜಾ ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಇನ್ನು ಸಚಿವ ಆರ್ ಬಿ ತಿಮ್ಮಾಪೂರ ಅವರು ಕೂಡ ಪೂಜಾ ಹಾಗೂ ಅವರ ಕುಟುಂಬಸ್ಥರೊಂದಿಗೆ ಮಾತನಾಡಿದರು. ಸಚಿವ ತಿಮ್ಮಾಪೂರ ಅವರು ಪೂಜಾ ಅವರೊಂದಿಗೆ ಮಾತನಾಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು. ಸದ್ಯ ನನಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ‌ ಸುರಕ್ಷಿತವಾಗಿದ್ದೇನೆ ಎಂದು ಪೂಜಾ ಅವರು ಮಾಹಿತಿ ನೀಡಿದ್ದಾರೆ. ಏನೇ ಇದ್ದರೂ ತಮ್ಮನ್ನು ಸಂಪರ್ಕಿಸಿ, ಸರ್ಕಾರ ತಮ್ಮ ಜೊತೆಗಿರಲಿದೆ ಎಂದು ಸಚಿವ ತಿಮ್ಮಾಪೂರ ಅವರು ಧೈರ್ಯ ತುಂಬಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments