Publish Date: Tue, 19 Feb 2019 (18:54 IST)
Updated Date: Tue, 19 Feb 2019 (18:55 IST)
ಮಂಡ್ಯ ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಿಎಂ ನಡೆಸಿದರು. ಸಣ್ಣ ನೀರಾವರಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ನಾಗರತ್ನ ಸ್ವಾಮಿ, ಶಾಸಕರಾದ ಎಂ.ಶ್ರೀನಿವಾಸ್, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ನಾರಾಯಣ ಗೌಡ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿ ಗೌಡ, ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೇದ್ ಅಖ್ತರ್, ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯಾಲಕ್ಕಿ ಗೌಡ ಮತ್ತಿತರರು ಇದ್ದರು.