Publish Date: Sat, 19 Aug 2017 (17:43 IST)
Updated Date: Sat, 19 Aug 2017 (17:45 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸಿಎಂ ಸಿದ್ದರಾಮಯ್ಯ ಸರಕಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.
ಸುಳ್ಳುಕೇಸ್ ದಾಖಲಿಸಿ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ನಾಳೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಗುಡುಗಿದ್ದಾರೆ.
ಶಿವರಾಮ್ ಕಾರಂತ ಬಡಾವಣೆ ಡಿನೋಟಿಫಿಕೇಶನ್ ವಿವಾದದಲ್ಲಿ ಯಡಿಯೂರಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಎಸಿಬಿ ಅಧಿಕಾರಿಗಳಿಗೆ ಬಡ್ತಿ ನೀಡುವ ಆಮಿಷವೊಡ್ಡಲಾಗುತ್ತಿದೆ. ರಾಜಕೀಯ ದ್ವೇಷದಿಂದ ಬಿಎಸ್‌ವೈ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕಳೆದ 2010-2011 ರಲ್ಲಿ ಭೂ ಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರ ಅವರ ಮೇಲೆ ಎಸಿಬಿ ಅಧಿಕಾರಿಗಳು ಸುಳ್ಳು ಹೇಳಿಕೆ ನೀಡುವಂತೆ ಒತ್ತಡ ಹೇರಿದ್ದಾರೆ ಎನ್ನುವ ವಿವಾದ ಇದೀಗ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.