ಸಿಎಂಗೆ ಸಿದ್ದು ತಿರುಗೇಟು?

Webdunia
ಮಂಗಳವಾರ, 31 ಮೇ 2022 (11:17 IST)
ಬೆಂಗಳೂರು : ‘ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ.
 
ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ. ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ.

ಬೇಗ ‘ಘರ್ ವಾಪಸಿ’ ಆಗಬಿಡಿ’. ‘ಸಿದ್ದರಾಮಯ್ಯ ದ್ರಾವಿಡರೇ? ಆರ್ಯರೇ?’ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ ಪರಿಯಿದು.

 ‘ಬೊಮ್ಮಾಯಿವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ?

ಭಾರತ ಚೀನಾ ಗಡಿಯನ್ನು ಆ ದೇಶದ ಬೇಡಿಕೆಯಂತೆ 1959ರ ಗಡಿರೇಖೆಗೆ ಒಪ್ಪಿಕೊಂಡು ರಾಜಿ ಮಾಡಿಕೊಂಡಿದ್ದು ಇತ್ತೀಚಿನ ಇತಿಹಾಸ. ಗಾಲ್ವಾನ್ ಕಣಿವೆಯಲ್ಲಿ ನಮ್ಮ ಸೈನಿಕರನ್ನು ಲಾಠಿ, ದೊಣ್ಣೆಗಳಿಂದ ಕಾದಾಡುವಂತೆ ಮಾಡಿದ್ದನ್ನು ಕೂಡಾ ದೇಶದ ಜನ ಮರೆತಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments