Publish Date: Wed, 04 Oct 2023 (18:04 IST)
Updated Date: Wed, 04 Oct 2023 (20:08 IST)
ಗೊಲ್ಲರು, ಕುರುಬರು, ಕೋಳಿ ಸಮಾಜ ಸೇರಿದಂತೆ ವಿವಿಧ ಸಮಾಜಗಳನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್‌ನ್ಯಾಷನಲ್‌ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ. ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಇನ್ನು ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.