Normal
0
false
false
false
EN-US
X-NONE
X-NONE
ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಕರೆದಿದ್ದಾರೆ.
ಬೆಳಿಗ್ಗೆ 11ಕ್ಕೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಸೋಂಕು ಹಚ್ಚಿರುವ ಜಿಲ್ಲೆಗಳ ಡಿಸಿಗಳ ಜೊತೆ ಮೊದಲು ಸಭೆ ನಡೆಸಲಿದ್ದಾರೆ. ಕಲಬುರಗಿ, ಮೈಸೂರು, ಮಂಗಳೂರು, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ರಾಯಚೂರು ಡಿಸಿಗಳ ಜೊತೆ ಸಿಎಂ ಸಭೆ.
ಉಳಿದ ಜಿಲ್ಲೆಗಳ ಡಿಸಿ ಜೊತೆ ಸಂಜೆ ಸಿಎಂ ಸಭೆ ಮಾಡಲಿದ್ದಾರೆ ಎನ್ನಲಾಗಿದೆ. ಡಿಸಿಗಳ ಸಭೆಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.