Select Your Language

Notifications

webdunia
webdunia
webdunia
webdunia

ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ
ಹಾವೇರಿ , ಗುರುವಾರ, 13 ಏಪ್ರಿಲ್ 2023 (08:22 IST)
ಹಾವೇರಿ : ಬಿಜೆಪಿ ಬುಧವಾರ ರಾತ್ರೋರಾತ್ರಿ ಬಿಡುಗಡೆ ಮಾಡಿದ 2ನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಹಾಲಿ ಶಾಸಕ ನೆಹರೂ ಓಲೇಕಾರ್ ಕೆಂಡಾಮಂಡಲರಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ 2ನೇ ಪಟ್ಟಿಯಲ್ಲಿ ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರೂ ಓಲೇಕಾರ್ಗೆ ಟಿಕೆಟ್ ಮಿಸ್ ಆಗಿದೆ. ಹಾವೇರಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಮಿಸ್ ಆಗಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷ ಸಿದ್ದರಾಜ ಕಲ್ಲಕೋಟಿ ಕಾರಣ ಎಂದು ಅಸಮಾಧಾನ ಹೊರಹಾಕಿದ್ದಾರೆ. 

ಅವನ ಕ್ಷೇತ್ರದ ಚುನಾವಣೆ ಹೇಗೆ ಮಾಡುತ್ತಾನೆ ಎಂಬುದನ್ನ ನೋಡುತ್ತೇನೆ. ಜಿಲ್ಲೆಯಲ್ಲಿ ಎಷ್ಟು ಸೀಟು ಬಿಜೆಪಿ ಗೆಲ್ಲಿಸುತ್ತಾನೆ. ಯಡಿಯೂರಪ್ಪ ಹೆಸರಿನಲ್ಲಿ ಸಿಎಂ ಆದವನು. ಯಡಿಯೂರಪ್ಪನವರಿಗೆ ಮೋಸ ಮಾಡಿದ್ದಾನೆ ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೆಸ್ಲಾ : ಮಾಡೆಲ್ 3 ಕಾರಿನ ವಿಶೇಷತೆಗಳು ಏನು?