Publish Date: Wed, 13 Nov 2019 (10:42 IST)
Updated Date: Wed, 13 Nov 2019 (10:43 IST)
ಬೆಂಗಳೂರು : ಇಂದು ಸುಪ್ರೋಂಕೋರ್ಟ್ ನಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಹೌದು. ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರದ ರಚನೆಗೆ ಕಾರಣರಾದ ಅನರ್ಹ ಶಾಸಕರ ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಈ ಹಿನ್ನಲೆಯಲ್ಲಿ ಅನರ್ಹ ಶಾಸಕರಲ್ಲಿ ಮಾತ್ರವಲ್ಲ ಬಿಜೆಪಿ ಶಾಸಕರಲ್ಲಿಯೂ ಟೆನ್ಷನ್ ಶುರುವಾಗಿದೆ.
ಆದಕಾರಣ ಸಿಎಂ ಯಡಿಯೂರಪ್ಪ ಇಂದು ಮಧ್ಯಾಹ್ನ 3 ಗಂಟೆವರೆಗೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅನರ್ಹರ ತೀರ್ಪಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.