Select Your Language

Notifications

webdunia
webdunia
webdunia
webdunia

ಸ್ಥಳ ಪರಿಶೀಲನೆ ಮಾಡಿದ ಸಿಎಂ?

ಸ್ಥಳ ಪರಿಶೀಲನೆ ಮಾಡಿದ ಸಿಎಂ?
ಬೆಂಗಳೂರು , ಶನಿವಾರ, 18 ಜೂನ್ 2022 (14:21 IST)
ಬೆಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್ 21, 22ರಂದು ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು,

ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರಿಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿರುವ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ಜೂನ್ 20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ.

ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಧಾರವಾಡಕ್ಕೆ ಕಾಲಿಟ್ಟ ಅಗ್ನಿಪಥ್ ಪ್ರತಿಭಟನೆ ಪೊಲೀಸರಿಂದ ಲಘು ಲಾಠಿ ಪ್ರಹಾರ