Publish Date: Mon, 28 Nov 2022 (07:20 IST)
Updated Date: Mon, 28 Nov 2022 (08:21 IST)
ಬೆಂಗಳೂರು : ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಪ್ರಯಾಣ ಬೆಳಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ನಾಳೆ ಮೈಸೂರು ಪ್ರವಾಸದಿಂದ ಬೆಂಗಳೂರಿಗೆ ವಾಪಸ್ಸಾದ ಬಳಿಕ ಸಿಎಂ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
ಅಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ವಿಚಾರ, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸಂಪುಟ ವಿಸ್ತರಣೆಗೆ ಮತ್ತೆ ಮರುಜೀವ ಸಿಗುವ ಸಾಧ್ಯತೆಯಿದೆ.
ಇನ್ನೂ ಗಡಿ ವಿವಾದ ಮಹಾರಾಷ್ಟ್ರ ಕ್ಯಾತೆ ತೆಗೆದಿದ್ದು, ಗಡಿಯಲ್ಲಿ ಶಾಂತಿಯೂ ಕದಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮುಕುಲ್ ರೋಹ್ಟಗಿಯವರನ್ನು ಭೇಟಿ ಮಾಡಲಿದ್ದಾರೆ.
Ramya kosira
Publish Date: Mon, 28 Nov 2022 (07:20 IST)
Updated Date: Mon, 28 Nov 2022 (08:21 IST)