Publish Date: Tue, 18 Dec 2018 (12:27 IST)
Updated Date: Tue, 18 Dec 2018 (12:31 IST)
ಬೆಳಗಾವಿ : ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ನಡೆಯಲಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಗೈರಾಗಿದ್ದಾರೆ.
ಮೈತ್ರಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರ ಅತೃಪ್ತಿ ಹಿನ್ನೆಲೆಯಲ್ಲಿ ಸಿಎಂ ಮುಂದೆಯೇ ಸಮಸ್ಯೆ ಬಗೆಹರಿಸಿಕೊಳ್ಳಲಿ ಅಂತ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಹಾಗೇ ಈ ಸಭೆಗೆ ಸಿಎಂ ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಸಭೆಗೆ ಆಗಮಿಸುವುದಾಗಿ ಹೇಳಿದ ಸಿಎಂ ಕೊನೆ ಕ್ಷಣದಲ್ಲಿ ಸಭೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ -ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿರುವ ಬಿಜೆಪಿಗೆ ಸಿಎಲ್ ಪಿ ಸಭೆ ಮೂಲಕವೇ ತಿರುಗೇಟು ನೀಡಬೇಕೆಂದು ಕಾಂಗ್ರೆಸ್ ನಾಯಕರ ಬಳಿ ಹೇಳಿಕೊಂಡಿದ್ದ ಸಿಎಂ ಇದೀಗ ತಿರುಪತಿ ಪ್ರವಾಸದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಬರಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.